ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾ ವಣೆಯ ನಕಲಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸುವ ಹಿಂದೆ ದೆಹಲಿಯಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಹೇರುವ ಸಂಚು ನಡೆದಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ದೆಹಲಿಯಲ್ಲಿ ಯಾವುದೇ ಅಧಿಕಾರಿಯ ಪೋಸ್ಟಿಂ ಗ್, ವರ್ಗಾ ವಣೆ ಆಗಿಲ್ಲ. ಅಧಿಕಾರಿಗಳು ಸರ್ಕಾರದ ಸಭೆಗಳಿಗೆ ಬರುತ್ತಿಲ್ಲ. ಕಳೆದ ವಾರ, ಲೆಫ್ಟಿನೆಂಟ್ ಗವರ್ನ ರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಆಧಾರರಹಿತ ಪತ್ರ ಬರೆದು, ಮುಖ್ಯಮಂತ್ರಿಯವರ ಆಪ್ತ ಕಾರ್ಯ ದರ್ಶಿಯನ್ನೂ ವಜಾ ಮಾಡಿಸಿದ್ದಾರೆ. ಇವೆಲ್ಲವೂ ದೆಹಲಿ ಸರ್ಕಾರ ದ ಮೇಲೆ ಮಾಡಿರುವ ಸಂಚು ಎಂದು ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ರಾಷ್ಟ್ರ ಪತಿ ಆಳ್ವಿಕೆಯನ್ನು ಜಾರಿಗೆ ತರುವುದು ಕಾನೂನುಬಾಹಿರ, ಅಸಾಂವಿದಾನಿಕ ಮತ್ತು ಜನರ ತೀರ್ಪಿಗೆ ವಿರುದ್ಧವಾದದ್ದು ಎಂದು ಬಿಜೆಪಿಯನ್ನು ಎಚ್ಚರಿಸಲು ಬಯಸುತ್ತೇನೆ. ದೆಹಲಿ ಜನರು ಅರವಿಂದ ಕೇ ಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದೂ ಅವರು ಹೇ ಳಿದ್ದಾರೆ.