ನವದೆಹಲಿ : ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ಪೈಸ್ಜೆಟ್ ವಿಮಾನವೊಂದರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಎಟಿಆರ್ ವಿಮಾನದ ನಿರ್ವಹಣಾ ಕಾರ್ಯ ಪ್ರಗತಿಯಲ್ಲಿದ್ದಾಗ ಒಂದು ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಎಂಜಿನಿಯರ್ಗಳ ಗಮನಕ್ಕೆ ಬಂದಿದೆ.
ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಲಾಯಿತು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಅದೃಷ್ಟವಶಾತ್ ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸ್ಪೈಸ್ಜೆಟ್ ಅನ್ನು ವಿಸ್ತರಿತ ಕಣ್ಗಾವಲು ವ್ಯಾಪ್ತಿಯಿಂದ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ಹೊರಗಿಟ್ಟ ದಿನವೇ ಈ ಘಟನೆ ಸಂಭವಿಸಿದೆ. ಹಲವು ಸುತ್ತಿನ ತಪಾಸಣೆಯ ಬಳಿಕ ಡಿಜಿಸಿಎ ಈ ಕ್ರಮ ಕೈಗೊಂಡಿತ್ತು. ವಿಮಾನಕ್ಕೆ ಬೆಂಕಿ ಹೊತ್ತಿದ ಘಟನೆ ಬಗ್ಗೆ ಡಿಜಿಸಿಎ ತನಿಖೆಗೆ ಆದೇಶಿಸಿದೆ.