ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟಿರುವ ಆಪ್ ನಾಯಕ ಸಂಜಯ್ ಸಿಂಗ್ ಅವರು ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ.
ಸಂಜಯ್ ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿದೆ.
ಇನ್ನು ಈ ವಾರದ ಆರಂಭದಲ್ಲಿ, ದೆಹಲಿ ನ್ಯಾಯಾಲಯವು ಸಂಜಯ್ ಸಿಂಗ್ ಅವರ ಇಡಿ ಕಸ್ಟಡಿಯನ್ನು ಶುಕ್ರವಾರ ಅಂದರೆ ಅಕ್ಟೋಬರ್ 13 ರವರೆಗೆ ವಿಸ್ತರಿಸಿದೆ.