ನವದೆಹಲಿ: ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ಇಬ್ಬರು ರೋಗಿಗಳು ಗುಂಡಿಕ್ಕಿ ಕೊಂದಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಇಬ್ಬರು ವ್ಯಕ್ತಿಗಳು ಗಾಯಗಳೊಂದಿಗೆ ಆಸ್ಪತ್ರೆಗೆ ಬಂದರು ಮತ್ತು ಡ್ರೆಸ್ಸಿಂಗ್ ನಂತರ ಅವರು ವೈದ್ಯರನ್ನು ಭೇಟಿಯಾಗಲು ಒತ್ತಾಯಿಸಿದರು.
ಬಳಿಕ ವೈದ್ಯರ ಕ್ಯಾಬಿನ್ನಲ್ಲಿ ಅವರನ್ನು ಗುಂಡಿಕ್ಕಿ ಕೊಂದು ಅಲ್ಲಿಂದ ಪರಾರಿಯಾಗಿದ್ದಾರೆ. ಆರೋಪಿಯನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.