ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ತೀರ್ಪು ಹೊರಬಂದಿದೆ. ಆಗಸ್ಟ್ 6ರಂದು ಸಿಸೋಡಿಯಾ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಪು ಕಾಯ್ದಿರಿಸಿತ್ತು. 530 ದಿನಗಳ ನಂತರ ಅಂದರೆ 17 ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದ ಮನೀಶ್ ಸಿಸೋಡಿಯಾ ಹೊರಬರಲಿದ್ದಾರೆ