ನವದೆಹಲಿ: ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು( ಭಾನುವಾರ) ತಿಹಾರ್ ಜೈಲಿನಲ್ಲಿ ಶರಣಾದರು.
ಜೈಲಿಗೆ ಶರಣಾಗುವ ಮುನ್ನ ಅವರು, ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ಪ್ಲೇಸ್‌ನ ಹನುಮಾನ್ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ಪಕ್ಷದ ಕಚೇರಿಯಲ್ಲಿ ಎಎಪಿ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಮಾರ್ಚ್ ತಿಂಗಳಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರಿಗೆ ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಜೂನ್ 1ರವರೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು