ಗುಜರಾತ್ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
“ಅಜಾನ್ ಮಾನವನ ಧ್ವನಿಯ ಡೆಸಿಬಲ್ ಮಟ್ಟವನ್ನು ಮೀರಿ ಮಾಲಿನ್ಯವನ್ನು ಹೇಗೆ ಉಂಟುಮಾಡುತ್ತದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ದೇವಸ್ಥಾನಗಳಲ್ಲಿ ಮುಂಜಾನೆ 3 ಗಂಟೆಗೆ ಡೋಲ್ ಹಾಗೂ ಸಂಗೀತದೊಂದಿಗೆ ಆರತಿ ಮಾಡಲಾಗುತ್ತದೆ.
ಘಂಟೆಗಳನ್ನೂ ಬಾರಿಸಲಾಗುತ್ತದೆ. ಇವುಗಳಿಂದ ಯಾರಿಗೂ ತೊಂದರೆ ಇಲ್ಲವೇ?’ ಎಂದು ಪ್ರಶ್ನಿಸಿ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.