ನವದೆಹಲಿ: ಇಂದು ದೇಶಾದ್ಯಂತ 46 ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.
ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.
ದೇಶಾದ್ಯಂತ ಹೊಸ ನೇಮಕಾತಿಯಡಿ ಆಯ್ಕೆಯಾದ ಈ ಅಭ್ಯರ್ಥಿಗಳು ಪರಮಾಣು ಶಕ್ತಿ ಇಲಾಖೆ, ಕಂದಾಯ ಇಲಾಖೆ, ಅಂಚೆ ಇಲಾಖೆ, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಸಾಂಖಿಕ ಇಲಾಖೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾರೆ.
ಆ.28ರಂದು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 51 ಸಾವಿರ ಮಂದಿಗೆ ಸೇರ್ಪಡೆ ಪತ್ರ ನೀಡಲಾಗಿತ್ತು.
ರೋಜ್ಗಾರ್ ಮೇಳದಲ್ಲಿ ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.