‘ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಯೋಗ ಸಹಾಯಕ’- ವಿಜಯೇಂದ್ರ

ಬೆಂಗಳೂರು: ಯೋಗವನ್ನು ಒಂದು ದಿನ ಮಾಡಿದರೆ ಸಾಲದು, ದಿನನಿತ್ಯ ನಮ್ಮ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಾವು ಆರೋಗ್ಯ ಕಾಪಾಡಿಕೊಂಡು ಮಾನಸಿಕ ನೆಮ್ಮದಿಯಿಂದ ಬದುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಯೋಗಾಸನ ಪೂರ್ವಭಾವಿ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯೋಗವು ಸುಮಾರು 6 ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವನ್ನು ಹೊಂದಿದೆ ಎಂದು ವಿವರಿಸಿದರು.

ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಕೇವಲ ಭಾರತದಲ್ಲಷ್ಟೇ ಅಲ್ಲ, ವಿಶ್ವಸಂಸ್ಥೆ ಒಳಗೊಂಡಂತೆ ಅನೇಕ ರಾಷ್ಟ್ರಗಳಲ್ಲೂ ಸಹ ಯೋಗ ದಿನದ ಆಚರಣೆ ನಡೆಯುತ್ತದೆ. ಜಗತ್ತಿನ ಅನೇಕ ರಾಷ್ಟ್ರಗಳಲ್ಲಿ ಯೋಗ ದಿನಾಚರಣೆ ಮಾಡಲು ಅದರ ಕೀರ್ತಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ವಿಶ್ಲೇಷಿಸಿದರು.
ಆಧುನಿಕ ಯುಗದಲ್ಲಿ ಮನುಷ್ಯ- ಮನುಷ್ಯರ ನಡುವೆ ಸಂಬಂಧಗಳು ನಶಿಸಿ ಹೋಗುವ ಈ ಸಂದರ್ಭದಲ್ಲಿ, ದೈಹಿಕ- ಮಾನಸಿಕವಾಗಿ ಪರದಾಡುತ್ತಿರುವ ಮಾನವ, ನಮ್ಮ ಸಮಸ್ಯೆಗಳಿಂದ ಹೊರಕ್ಕೆ ಬರಲು ಯೋಗ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.

Advertisement

ಸಾಗರದಾಚೆಗೂ, ಅಲ್ಲಿನ ಜನರಿಗೂ ಈ ಯೋಗದ ಅನುಕೂಲ ತಲುಪಬೇಕು, ಮನುಕುಲ ಉದ್ಧಾರ ಆಗಬೇಕು, ಈ ಭೂಮಿ ಮೇಲೆ ಶಾಂತಿ ನೆಲೆಸಬೇಕು ಮತ್ತು ಮನುಷ್ಯರು ದೈಹಿಕ- ಮಾನಸಿಕ ಆರೋಗ್ಯವಂತರಾಗಿ ಬದುಕುಬೇಕೆಂಬ ದೂರದೃಷ್ಟಿಯಿಂದ ಮೋದಿಯವರು ಇದನ್ನು ವಿಶ್ವದ ಇತರ ದೇಶಗಳಿಗೂ ತಲುಪಿಸಿದ್ದಾರೆ. ಯೋಗ ದಿನವನ್ನು ದೊಡ್ಡಮಟ್ಟದಲ್ಲಿ ಎಲ್ಲೆಡೆ ಆಚರಿಸಲಾಗುತ್ತಿದೆ ಎಂದು ನುಡಿದರು.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement