ದಾವಣಗೆರೆ; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.