ಧರ್ಮಸ್ಥಳ: ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿಯೋರ್ವ ಕೋರ್ಟ್‌ಗೆ ತಲೆಬರುಡೆ ಹಿಡಿದು ಬಂದಿದ್ದು, ಅದೇ ದೂರು ಆಧರಿಸಿ ಫೀಲ್ಡ್‌ಗೆ ಇಳಿದಿರುವ ಎಸ್ಐಟಿ ಅಧಿಕಾರಿಗಳು ಆ ಅನಾಮಿಕ ವ್ಯಕ್ತಿ ತೋರಿಸಿದ ಸ್ಥಳಗಳ ಪೈಕಿ ಐದು ಸ್ಥಳದಲ್ಲಿ ಶೋಧ ನಡೆಸಿದ್ದಾರೆ. ಆದ್ರೆ, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಇದರ ನಡುವೆ ಇದೀಗ ಎಸ್ಐಟಿ ಸಹಾಯವಾಣಿ ಆರಂಭಿಸಿದೆ.
ಧರ್ಮಸ್ಥಳ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ ಕರೆದೊಯ್ದು 13 ಸ್ಥಳ ಗುರುತು ಮಾಡಿದ್ದು, ಇದೀಗ ಭೂಮಿ ಅಗೆಯುವ ಕೆಲಸ ಶುರುವಾಗಿದೆ.
ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೆ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದ್ದಾರೆ. ಸದ್ಯ, ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ ಮುಕ್ತಾಯವಾಗಿದೆ. ಆದ್ರೆ, ಇಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಈ ನಡುವೆ ಎಸ್‌ಐಟಿ ತಂಡ ಮಂಗಳೂರಿನ ಎಸ್ಐಟಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಿದ್ದು, 0824-2005301ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದೆ.