ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ಮ ಹತ್ವದ ನಿರ್ಧಾರ ಪ್ರಕಟಿಸಿದೆ.
ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತೇ ಇಲ್ವಂತೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.