ಬೆಂಗಳೂರು : ಕನ್ನಡದ ಖ್ಯಾತ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರು ನಿನ್ನೆ ಕೊನೆಯುಸಿರು ಎಳೆದಿದ್ದಾರೆ.
ಕಿಡ್ನಿ ವೈಫಲ್ಯದಿಂದ ದೀಪಕ್ ಅರಸ್ ಅವರು ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ದೀಪಕ್ ಅರಸ್ ಗುರುತಿಸಿಕೊಂಡಿದ್ದರು. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ದೀಪಕ್ ಅರಸ್ ನಿಧನರಾಗಿದ್ದಾರೆ. ಅಮೂಲ್ಯ ಸಹೋದರ ದೀಪಕ್ ಅರಸ್ ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ನಿರ್ದೇಶಿಸಿದ್ದಾರೆ.