ಮುಂಬೈ: ಗರ್ಭಕಂಠ ಕ್ಯಾನ್ಸರ್ ಕುರಿತು ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ ಅವರಿಗೆ ಇದೀಗ 100 ಕೋಟಿ ರೂ. ಮಾನನಷ್ಟ ಸಂಕಷ್ಟ ಎದುರಾಗಿದೆ.
ಗರ್ಭಕಂಠ ಕ್ಯಾನ್ಸರ್ ಕುರಿತು ಸಾವಿನ ನಾಟಕವಾಡಿದ್ದಕ್ಕೆ ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ.
ಇನ್ನು ಮೊನ್ನೆಯಷ್ಟೇ ಪೂನಂ ಪಾಂಡೆ ವಿರುದ್ದ ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿದೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು.
ಇನ್ನು ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದು, ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.