ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿಯನ್ನ ಆಗಸ್ಟ್ 14ರವರೆಗೆ ನ್ಯಾಯಾಲಯ ವಿಸ್ತರಣೆ ಮಾಡಿದೆ.
ನಟ ದರ್ಶನ್ ಹಾಗೂ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಸಿಎಂ ನ್ಯಾಯಾಲಯವು ಆದೇಶ ಹೊರಡಿಸಿದೆ.
ಮನೆಯೂಟ, ಹಾಸಿಗೆ ಪುಸ್ತಕ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು ವಿಚಾರಣೆ ಆಗಸ್ಟ್ 20 ರಂದು ನಡೆಯಲಿದೆ.
				
															
                    
                    
                    
                    
                    































