ಬೆಂಗಳೂರು: ಸ್ಯಾಂಡಲ್‌ವುಡ್ ಖ್ಯಾತ ನಟ, ಸಿನಿಮಾ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.
ಅವರು ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಅಪಾರ್ಟ್‌ಮೆಂಟ್‌ನಿಂದ ಕೊಳೆತ ವಾಸನೆ ಬಂದ ಕಾರಣ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಅವರು ಎರಡನೇ ಮದುವೆ ಸಹ ಆಗಿದ್ದರು.!