ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ನಿಮಿತ್ತ ಕಟೌಟ್ ಕಟ್ಟಲು ಹೋಗಿದ್ದ ಮೂವರು ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.