ನವದೆಹಲಿ : ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಕೇಳಿಕೊಂಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು ನ.೮ರಂದು ಕೋರ್ಟ್ ಹಾಲ್ನಲ್ಲಿ ಮಾತನಾಡಿದ ಅವರು, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ ಅರಿವಿಗೆ ಬಾರದಂತೆ ಎಷ್ಟೋ ಜನರನ್ನು ಭೇಟಿಯಾಗಿರುತ್ತೇವೆ. ನಾನು ನಿಮ್ಮೆಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನಿಂದ ತಪ್ಪಾಗಿದ್ದರೆ ಅಥವಾ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ ಎಂದು ತಿಳಿಸಿದ್ದಾರೆ.
ಮುಂದಿನ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ವಿಚಾರವಾಗಿ, ಅವರು ತುಂಬಾ ಗಟ್ಟಿಯಾದ ವ್ಯಕ್ತಿಯಾಗಿದ್ದಾರೆ. ನ್ಯಾಯಕ್ಕೆ ಬದ್ಧರಾಗಿದ್ದಾರೆ ಎಂದು ಸಂತೋಷದಿಂದ ನಿರ್ಗಮಿಸುತ್ತಿದ್ದೇನೆ ಎಂದಿದ್ದಾರೆ.