ಬೆಂಗಳೂರು : ಕಲಾಪದಲ್ಲಿ ಹೆಚ್‌ಡಿ ರೇವಣ್ಣ ಮತ್ತು ಫ್ಯಾಮಿಲಿ ಅರೆಸ್ಟ್ ಆಗಿರುವ ಕುರಿತು ಪ್ರಸ್ತಾಪವಾಗಿದ್ದು, ಈ ವೇಳೆ ರೇವಣ್ಣ ಸಿಟ್ಟಿಗೆದ್ದ ಘಟನೆ ನಡೆದಿದೆ. ವಿಧಾನಸಭೆಯುಲ್ಲಿ ಮಾತನಾಡಿ, ‘ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ’ ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ಮಾತನಾಡಿದ್ದಾರೆ. ನನ್ನ ಮೇಲೆ ಯಾರೋ ಆರೋಪ ಮಾಡ್ತಿದ್ದಾರೆ. ಹೆಣ್ಣು ಮಗಳನ್ನು ಕರೆದುಕೊಂಡು ಬಂದು ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳುತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ? ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ರೇವಣ್ಣ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೋಟಿಸ್ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.