ದೆಹಲಿ: ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಇಲ್ಲ. ಲೋಕಸಭೆ ಚುನಾವಣೆಯಲ್ಲಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ಬಿಜೆಪಿಯ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ‘ಚುನಾವಣಾ ಸಂದರ್ಭದಲ್ಲಿ ವಿರೋಧ ಪಕ್ಷದವರು ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಾರೆ ಎಂದು ಟೀಕಿಸಿದರು.
ತಾವು ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಮತ್ತು ಈಗ ಪ್ರಧಾನಿಯಾಗಿರುವಾಗಲೂ ತಮ್ಮ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ ಎಂದು ತಿಳಿಸಿದರು.