ನವದೆಹಲಿ: “ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ʼನೀರಿನ ಕಳ್ಳʼ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರು ಬುಧವಾರ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯೆ ನೀಡಿದರು.
“ಈಗ ಈಶ್ವರಪ್ಪ ಅವರು ಎಲ್ಲಿದ್ದಾರೆ? ನಾನೆಲ್ಲಿ ಇದ್ದೀನಿ? ವಿಧಾನಸಭೆಯಲ್ಲಿ ನನ್ನ ಅಪ್ಪನ ಬಗ್ಗೆ ಮಾತಾಡಿದ್ದರು. ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ, ತೆಗೆದುಕೊಳ್ಳಲಿ ಎಂದರು.
ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಕಾವೇರಿ ನೀರನ್ನು ಒತ್ತೆ ಇಟ್ಟಿದ್ದಾರೆ, ಅವರು ʼನೀರಿನ ಕಳ್ಳʼ ಎಂದು ಜರೆದಿದ್ದರು.