ಮೈಸೂರು:ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದರು, ಇದಕ್ಕಾಗಿ ಅಡ್ವಾಣಿಯವರನ್ನು ಭೇಟಿ ಮಾಡಿದ್ದರು ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಮಾತ್ರಕ್ಕೆ ಬಿಜೆಪಿ ಸೇರಲು ಹೋಗಿದ್ದೆ ಅಂತಲ್ಲಾ. ನಾನು ಅಡ್ವಾಣಿಯವರನ್ನು ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುವುದು ನಿಜ.
ಇತ್ತೀಚೆಗೆ ಅಮಿತ್ ಶಾ ಅವರನ್ನು ಸಹ ಭೇಟಿ ಮಾಡಿದ್ದೇನೆ. ಹಾಗಾದರೆ ಬಿಜೆಪಿ ಸೇರಲು ಹೋಗಿದ್ದೆ ಎಂದರ್ಥವೇ ಎಂದು ಪ್ರಶ್ನಿಸಿದರು.
ನಾನು ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಕೋಮುವಾದಿಗಳೊಂದಿಗೆ ಯಾವುದೇ ಕಾರಣಕ್ಕೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ” ಎಂದು ಕಿಡಿಕಾರಿದರು.