ನವದೆಹಲಿ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಆದರೆ, ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಡ್ಡಿಮುರಿದಂತೆ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.
