ಹಾಸನ: ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಅನುಮೋದನೆಯಾಗಿ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 13 ಶುಶ್ರೂಷಕಿಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ದಾಖಲಾತಿಗಳನ್ನು ಪರಿಶೀಲನೆಯನ್ನು ಜು.28 ರಂದು ಬೆ.10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ನಡೆಸಲಾಗುವುದು.
ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್ ನಲ್ಲಿ ನೋಂದಣಿಯಾಗಿರಬೇಕು. ವಯೋಮಿತಿ 45 ವರ್ಷಗಳು, ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ. ಕಿಯೋನಿಕ್ಸ್ ಹಾಗೂ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕಡ್ಡಾಯ MS Office ಬಗ್ಗೆ ಮಾಹಿತಿ ಹೊಂದಿರತಕ್ಕದು. ಮಾಸಿಕ ವೇತನ 14,581 ರೂ.
ಜು.22 ರಿಂದ ಜು.24 ರವರೆಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಚೇರಿ ಹಾಸನ ರವರಿಂದ ಅರ್ಜಿಗಳನ್ನು ಪಡೆದು ಅದೇ ದಿನ ಭರ್ತಿ ಮಾಡಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲಿನ ದಿನಾಂಕದಂದು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಹಾಜರಾಗಲು ಸೂಚಿಸಿದೆ. ಅರ್ಜಿ ಸಲ್ಲಿಸಲು ಜು.24 ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.