ಲೋಕಸಭಾ ಚುನಾವಣೆ ಹತ್ತಿರ ಬರುತ್ತಲೇ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಯಾರೆಂಬ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಮತ್ತು ಹಾಲಿ ಸಂಸದ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುರವರ ಬಗೆಗಿನ ಪರ ವಿರೋಧದ ಚರ್ಚೆಯ ನಡುವೆ ನಳಿನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಬಂದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಸಂಸದರ ಆದರ್ಶ ಗ್ರಾಮ ಯೋಜನೆಯನ್ನು ಸಮರ್ಪಕವಾಗಿ ಬಳಸಿ ಗುರಿ ಮುಟ್ಟುವಲ್ಲಿ ರಾಜ್ಯದ ಸಂಸದರ ಪೈಕಿ ಮಂಗಳೂರು ಸಂಸದರು ಪ್ರಥಮ ಸ್ಥಾನದಲ್ಲಿದ್ದಾರೆ ಎಂದು ಸಂಸದರ ಆದರ್ಶ ಗ್ರಾಮದ ಯೋಜನಾ ನಿರ್ದೇಶಕರು ಹೇಳಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ ಗ್ರಾಮವನ್ನು ಸಂಸದರು ಆಯ್ಕೆ ಮಾಡಿಕೊಂಡಿದ್ದು ಈ ಗ್ರಾಮದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಶಾಲೆ, ಆಸ್ಪತ್ರೆ, ಸಾರಿಗೆ ವ್ಯವಸ್ಥೆ, ನೆಟ್ವರ್ಕ್ ವ್ಯವಸ್ಥೆ ಸೇರಿದಂತೆ 55 ಕೋಟಿ ರೂಪಾಯಿ ಅನುದಾನವನ್ನು ಒಂದು ಗ್ರಾಮಕ್ಕೆ ಒದಗಿಸಿ ಆ ಗ್ರಾಮವನ್ನು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.