ದೆಹಲಿ: ನವೆಂಬರ್ 25 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಡಿಸೆಂಬರ್ 20 ರವರೆಗೆ ಮುಂದುವರಿಯುತ್ತದೆ ಎಂದು ತಿಳಿದುಬಂದಿದೆ.
ಈ ಚಳಿಗಾಲದ ಅಧಿವೇಶನದಲ್ಲಿ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆ ಮತ್ತು ವಕ್ಫ್(ತಿದ್ದುಪಡಿ) ಮಸೂದೆ – 2024 ಬಗ್ಗೆ ಚರ್ಚೆಯಾಗಲಿದೆ.
ಗೃಹ ಸಚಿವ ಅಮಿತ್ ಶಾ ಅವರು ವಕ್ಫ್(ತಿದ್ದುಪಡಿ) ಮಸೂದೆ, 2024 ಕುರಿತು ಮಾತನಾಡುತ್ತಾ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕರಿಸಲಾಗುವುದು ಎಂದು ಈ ಮೊದಲೇ ಪ್ರಸ್ತಾಪಿಸಿದ್ದಾರೆ. ಗುರ್ಗಾಂವ್ನ ಬಾದ್ಶಾಹ್ಪುರ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ವಕ್ಫ್ ಬೋರ್ಡ್ ಕಾನೂನನ್ನು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ನಾವು ಅದನ್ನು ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.