ಚಿತ್ರದುರ್ಗ : ಮಂಡ್ಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಿಡಿಗೇಡಿ ಯುವಕರಿಂದ ಕಲ್ಲು ತೂರಾಟ ಖಂಡಿಸಿ ಚಿತ್ರದುರ್ಗ ನಾಗರಿಕರ ಸಮಿತಿ ಮತ್ತು ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಒಕ್ಕೂಟದವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ ಜಿಲ್ಲಾಡಲಿತಕ್ಕೆ ಮನವಿ ಸಲ್ಲಿಸಲಾಯಿತು.
ಮಂಡ್ಯ ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನೆ ವೇಳೆ ಜಿಹಾದಿ ಮುಸ್ಲಿಂ ಯುವಕರಿಂದ (ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ದಾಳಿ ಮತ್ತು ಮಾರಕಾಸ್ತ್ರ) ಝಳಪಿಸಿ ಹಿಂದುಗಳ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ವಿಶ್ವ ಹಿಂದೂ ಪರಿಷದ್ ಖಂಡನೆ ಮಾಡಿ ಇದರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹಿಸಲಾಯಿತು.
ಈ ಕೃತ್ಯ ಅತ್ಯಂತ ಖಂಡನೀಯ. ತಕ್ಷಣ ಜಿಹಾದಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಈ ಕೃತ್ಯ ಉದ್ದೇಶಪೂರ್ವಕವಾಗಿದ್ದು ಅಲ್ಲದೆ ಪೂರ್ವಯೋಜಿತ ಕೃತ್ಯವಾಗಿದೆ. ಈ ಜಿಹಾದಿ ಯುವಕರ ಹಿಂದೆ ನಿಷೇಧಿತ ಇಸ್ಲಾಮಿಕ್ ಮೂಲಭೂತ ಸಂಘಟನೆಗಳ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದ್ದು ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ತನಿಖೆಗೆ ಒಪ್ಪಿಸಲು ಆಗ್ರಹಿಸಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಬದರಿನಾಥ್, 2024ರ ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ನಯನ, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಜಿ.ಎಂ.ಸುರೇಶ್, ನಗರಸಭಾ ಮಾಜಿ ಸದಸ್ಯರಾದ ನವೀನ್ ಚಾಲುಕ್ಯ, ಕೇಶವ, ವಿಶ್ವ ಹಿಂದೂ ಪರಿಷದ್ನ ಪ್ರಭಂಜನ್, ಶ್ರೀ ಪ್ರಸನ್ನ ಗಣಪತಿಯ ಅಧ್ಯಕ್ಷರಾದ ಗೋಪಾಲ್ರಾವ್ ಜಾಧವ್, ಬೇದ್ರೇ ನಾಗರಾಜ್, ಭಾನು ಮೂರ್ತಿ, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು. ಇದಕ್ಕೂ ಮುನ್ನಾ ನಗರದ ಆನೇ ಬಾಗಿಲ ಬಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.