ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ದರ್ಗಾ ಎದುರು ಸಾಗುತ್ತಿದ್ದಂತೆ ಕೆಲ ಕಿಡಿಗೇಡಿಗಳು ಇದ್ದಕ್ಕಿದ್ದಂತೆ ಕಲ್ಲು ತೂರಿದ್ದೇ ಗಲಾಟೆಗೆ ಕಾರಣ ಆಗಿವಾಗಿತ್ತು. ಈ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 6 ಪ್ರತ್ಯೇಕ ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಅಂತೆಯೇ ಈವರೆಗೂ 54 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಮಾಹಿತಿ ನೀಡಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ


































