ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ.
ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.