ನವದೆಹಲಿ: ನಾನು ಗರ್ಬಾ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಇದು ಅಸಲಿ ಅಲ್ಲ. ಕಿಡಿಗೇಡಿಗಳು ಡೀಪ್ ಫೇಕ್ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಇದು ತುಂಬ ಅಪಾಯಕಾರಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮಾಧ್ಯಮಗಳು ಡೀಪ್ ಫೇಕ್ ವಿಡಿಯೋಗಳ ಬಗ್ಗೆ ಜನತೆಗೆ ಅರಿವು ಮೂಡಿಸಬೇಕು. ನಾನು ಗಾರ್ಬಾ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ನೋಡಿದೆ. ಆದರೆ ಡೀಪ್ ಫೇಕ್ ವಿಡಿಯೋ ಆಗಿದೆ. ದೇಶ ಎದುರಿಸುತ್ತಿರುವ ದೊಡ್ಡ ಬೆದರಿಕೆಗಳಲ್ಲಿ ಇದು ಕೂಡ ಒಂದಾಗಿದೆ. ಮತ್ತು ಇದು ಸಮಾಜದಲ್ಲಿ ಅವ್ಯವಸ್ಥೆಗೆ ಕಾರಣವಾಗಬಹುದು ಎಂದು ನರೇಂದ್ರ ಮೋದಿ ಹೇಳಿದ್ದಾರೆ.