ಹುಲಿ ಉಗುರಿನ ಪೆಂಡೆಂಟ್ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಅರೆಸ್ಟ್ ಆಗುತ್ತಿದ್ದಂತೆ ರಾಜ್ಯದ ಸೆಲೆಬ್ರಿಟಿಗಳಿಗೂ ಇದರ ಬಿಸಿ ತಟ್ಟಿದೆ. ನಿಖಿಲ್ ಕುಮಾರ್‌ಸ್ವಾಮಿ ತನ್ನ ಮದುವೆಯಲ್ಲಿ ಇಂತಹದ್ದೇ ಪೆಂಡೆಂಟ್ ಹಾಕಿದ್ರು ಎನ್ನುವ ಸುದ್ದಿ ವೈರಲ್ ಆಗಿತ್ತು. ಸದ್ಯ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ನಿಖಿಲ್ ‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.