ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 13-15 ರವರೆಗೆ ಫ್ರಾನ್ಸ್‌ಗೆ ಭೇಟಿ ನೀಡಲಿದ್ದು, ಪ್ಯಾರಿಸ್‌ನಲ್ಲಿ ನಡೆಯುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಫ್ರಾನ್ಸ್‌ನಲ್ಲಿ ಎರಡು ದಿನಗಳ ಸುದೀರ್ಘ ಪ್ರವಾಸದ ನಂತರ, ಪ್ರಧಾನಿ ಮೋದಿ ಅವರು ಜುಲೈ 15 ರಂದು ಅಬುಧಾಬಿಗೆ ಭೇಟಿ ನೀಡಲಿದ್ದಾರೆ.
ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ಯಾರಿಸ್ ಭೇಟಿ ನೀಡಲಿದ್ದುಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಲಿದ್ದಾರೆ. ಜು.14 ರಂದು ನಡೆಯಲಿರುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಲಿದ್ದಾರೆ. ಇದೇ ಪರೇಡ್‌ನಲ್ಲಿ ಭೂಸೇನೆ, ವಾಯು ಮತ್ತು ನೌಕಾದಳದ ಭಾರತೀಯ ಸಶಸ್ತ್ರ ಪಡೆಗಳ ತುಕಡಿ ಭಾಗವಹಿಸಲಿದೆ.
ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ
ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಪ್ರಧಾನ ಮಂತ್ರಿ ಗೌರವಾರ್ಥವಾಗಿ ರಾಜ್ಯ ಔತಣಕೂಟ ಮತ್ತು ಖಾಸಗಿ ಭೋಜನವನ್ನು ಆಯೋಜಿಸಲಿದ್ದಾರೆ.
ಪ್ರಧಾನಮಂತ್ರಿ ಅವರು ಫ್ರಾನ್ಸ್ ಪ್ರಧಾನಿ, ಸೆನೆಟ್ ಅಧ್ಯಕ್ಷರು ಮತ್ತು ಫ್ರಾನ್ಸ್ ನ ರಾಷ್ಟ್ರೀಯ ಅಸೆಂಬ್ಲಿಯನ್ನು ಭೇಟಿಯಾಗಲಿದ್ದಾರೆ. ಅವರು ಫ್ರಾನ್ಸ್‌ನಲ್ಲಿರುವ ಭಾರತೀಯ ವಲಸೆಗಾರರು, ಭಾರತೀಯ ಮತ್ತು ಫ್ರೆಂಚ್ ಕಂಪನಿಗಳ ಸಿಇಒಗಳು ಮತ್ತು ಫ್ರೆಂಚ್ ಪ್ರಮುಖ ವ್ಯಕ್ತಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಜುಲೈ 15 ರಂದು ಪ್ರಧಾನಿ ಮೋದಿ ಅಬುದಾಬಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಅಬುಧಾಬಿಯ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.