ನಾಳೆ ಚಿತ್ರದುರ್ಗ ಮತ್ತು ದಾವಣಗೆರೆ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

WhatsApp
Telegram
Facebook
Twitter
LinkedIn

ಚಿತ್ರದುರ್ಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದವತಿಯಿಂದ ಚಿತ್ರದುರ್ಗ ಮತ್ತು ದಾವಣಗೆರೆ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಜು.5 ಭಾನುವಾರ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷರಾದ ಮಾಲತೇಶ್ ಮುದ್ದಜ್ಜಿ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಂಘದಿಂದ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಸಂಘ ಸಾಥ್ ನೀಡುತ್ತಿದೆ, ಇದರಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆ ಸರ್ಕಾರಿ ನೌಕರರ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುನಲ್ಲಿ ಶೇ.90 ರಷ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಂದ ಈಗಾಗಲೇ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿತ್ತು, ಇದರಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆಯಿಂದ ಒಟ್ಟು 528 ಮಕ್ಕಳು ಅರ್ಜಿಯನ್ನು ಸಲ್ಲಿಸಿದ್ದಾರೆ ಅದರಲ್ಲಿ ಚಿತ್ರದುರ್ಗದಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ 120 ಪಿಯುನಲ್ಲಿ 141 ದಾವಣಗೆರೆಯಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ 125 ಪಿಯುನಲ್ಲಿ 142 ಮಕ್ಕಳು ಸೇರಿದಂತೆ ಇಡೀ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ 4321 ಪಿಯುನಲ್ಲಿ 4497 ಸೇರಿದಂತೆ ಒಟ್ಟು 8819 ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದಾರೆ ಎಂದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ 2000 ನಗದು, ಉತ್ತಮವಾದ ಬ್ಯಾಗು, ಪ್ರಮಾಣ ಪತ್ರ, ಶಾಲು, ಹಾರ ಹಾಗೂ ಪುಸ್ತಕಗಳನ್ನು ಒಳಗೊಂಡಿದೆ. ಕಾರ್ಯಕ್ರಮವನ್ನು ರಾಜ್ಯ ಸಂಘ ನಡೆಸುತ್ತಿದ್ದು ಇದಕ್ಕೆ ಜಿಲ್ಲಾ ಸಂಘ ಜೊತೆಯಾಗಿ ವೇದಿಕೆಯನ್ನು ರೂಪಿಸಿದೆ, ಈ ಎಲ್ಲಾ ಕಾರ್ಯಕ್ರಮವನ್ನು ಸರ್ಕಾರದ ಅನುದಾನ ಇಲ್ಲದೆ ಸದಸ್ಯರು ನೀಡುವಂತ ವಂತಿಕೆಯಡಿಯಲ್ಲಿ ನಡೆಸಲಾಗುತ್ತಿದೆ ಎಂದ ಅವರು, ಜು.5 ರಂದು ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳು, ಹಾಗೂ ಹೊಸದುರ್ಗ ಮದುರೆಯ ಶ್ರೀ ಭಗೀರಥ ಗುರುಪೀಠದ ಡಾ.ಶ್ರೀ ಪುರುಷೋತ್ತಮಾನಂದ ಪುರಿ ಶ್ರೀಗಳು ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ ಉದ್ಘಾಟನೆ ಮಾಡಲಿದ್ದಾರೆ, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ವಹಿಸಲಿದ್ದಾರೆ. ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಗಳಾದ ರವಿ.ಡಿ.ಚೆನ್ನಣ್ಣ ಹಾಗೂ ಇನ್ ಸೈಟ್ ಐಎಎಸ್ ಸ್ಟಡಿ ಸೆಂಟರ್ನ ಸಂಸ್ಥಾಪಕ ನಿರ್ದೆಶಕರಾದ ವಿನಯಕುಮಾರ್ ಜಿ.ಬಿ. ಜಿಲ್ಲಾಧಿಕಾರಿಗಳಾದ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಎಸ್ ಆಕಾಶ್, ಜಿಲ್ಲಾ ರಕ್ಷಣಾಧಿಕಾರಿಗಳಾದ ರಂಜೀತ್ ಕುಮಾರ್ ಭಂಡಾರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಬಸವರಾಜು, ಖಂಜಾಚಿ ವಿವಿ ಶಿವರುದ್ರಯ್ಯ, ಗೌರವಾಧ್ಯಕ್ಷರಾದ ಮಲ್ಲಿಕಾರ್ಜನ ಬಿ. ಕಾರ್ಯಾಧ್ಯಕ್ಷರಾದ ಶಂಭುಗೌಡ, ಹಿರಿಯ ಉಪಾಧ್ಯಕ್ಷರಾದ ನಾಗರಾಜ ಆರ್.ಜುಮ್ಮನ್ನವರ, ಸುರೇಶ್ ಸಿ ಶೆಡಶ್ಯಾಳ, ಸೋಮಶೇಖರ್ಯ್ಯ, ಮೋಹನ್ಕುಮಾರ್ ಭಾಗವಹಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಖಂಜಾಚಿ ಮಲ್ಲಿಕಾರ್ಜನ ರಾಜ್ಯ ಪರಿಷತ್ ಸದಸ್ಯರಾದ ರಾಜಪ್ಪ, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಸಿ.ಟಿ, ವಿರೇಶ್, ಹಿರಿಯೂರು ರಮೇಶ್ ಭಾಗವಹಿಸಿದ್ದರು.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon