ಬೆಂಗಳೂರು: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ತಮ್ಮ ಪಕ್ಷ ಕೆಆರ್ಪಿಪಿ ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.
ಅಲ್ಲದೇ ಬಿಜೆಪಿ ಜೊತೆ ಕೆಆರ್ಪಿಪಿ ವಿಲೀನಕ್ಕೆ ಸರ್ವ ಸಮ್ಮತ ನಿರ್ಧಾರವಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕೆಆರ್ಪಿಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನವಾಗಿದೆ. ಇನ್ಜು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ನಾಯಕರ ಆಹ್ವಾನದ ಮೇರೆಗೆ ನಾಳೆ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ ಎಂದು ಅಧಿಕೃತವಾಗಿ ಘೋಷಿಸಿದರು.