ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಮಧುರೆ, ರಾಮಗಿರಿ, ಹೊಳಲ್ಕೆರೆ, ಹಾಲುರಾಮೇಶ್ವರ, ಹೊಸದುರ್ಗ, ಮಾಡದಕೆರೆ, ನಿರಗುಂದ, ಬಾಗೂರು, ಕಂಚೀಪುರ, ಮತ್ತೋಡು, ಗರಗ, ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ನವೆಂಬರ್ 29ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಮಧುರೆ, ರಾಮಗಿರಿ, ಹೊಳಲ್ಕೆರೆ, ಹಾಲುರಾಮೇಶ್ವರ, ಹೊಸದುರ್ಗ, ಮಾಡದಕೆರೆ, ನಿರಗುಂದ, ಬಾಗೂರು, ಕಂಚೀಪುರ, ಮತ್ತೋಡು, ಗರಗ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ಗ್ರಾಹಕರು ಸಹಕರಿಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.