ಬೆಂಗಳೂರು: 2023- 24ನೇ ಸಾಲಿನ, ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಾಂಕನ ಮಂಡಳಿ ನಡೆಸಿದ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಅಂದರೆ ಮಾರ್ಚ್ 30ರಂದು ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯ ವೆಬ್‌ಸೈಟ್ karresults.nic.in ನಲ್ಲಿ ಬೆಳಿಗ್ಗೆ ಹನ್ನೊಂದು ಗಂಟೆ ಸಮಯಕ್ಕೆ ಪ್ರಕಟವಾಗಲಿದೆ ಇಂದು ಮಂಡಳಿ ಮಾಹಿತಿ ನೀಡಿದೆ.
ಫೆಬ್ರವರಿ 12ರಿಂದ 27ರವರೆಗೂ ಪ್ರಥಮ ಪಿಯುಸಿ ಪರೀಕ್ಷೆ ನಡೆಯಿತು. ಈ ಪರೀಕ್ಷೆಯಲ್ಲಿ ಫೇಲ್ ಆದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ.
ಇನ್ನು ಮಂಡಳಿ ಕೂಡ ಪೂರಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಅನುತ್ತಿರ್ಣರದವರು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.