ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಮೇ 31ರಂದು ಪ್ರವೇಶವಾಗಲಿದ್ದು, ಜೂನ್ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು,ಕೊಡಗು, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ