ನಿಖಿಲ್ ಗೆಲುವಿಗಾಗಿ ದೇವರ ಮೊರೆಹೋದ ದೇವೇಗೌಡರ ಕುಟುಂಬ

ಬೆಂಗಳೂರು :ನಿಖಿಲ್ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರು ಗೆಲುವಿಗೆ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಚನ್ನಪಟ್ಟಣದಲ್ಲಿಂದು ನಿಖಿಲ್ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ನಾಮಪತ್ರ ಸಲ್ಲಿಕೆಗೂ ಮುನ್ನ ಕುಟುಂಬ ಸಮೇತ ದೇವರ ಮೊರೆ ಹೋಗಿದ್ದಾರೆ ನಿಖಿಲ್. ಬೆಂಗಳೂರಿನ ಜೆಪಿ ನಗರದಲ್ಲಿರುವ ವೆಂಕಟೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದು ಪತ್ನಿ ರೇವತಿ ಕೂಡಾ ವಿಶೇಷ ಪ್ರಾರ್ಥನೆ ಕೈಗೊಂಡಿದ್ದಾರೆ.

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಗರದ ಶೇರೂ ಹೋಟೆಲ್ ಸರ್ಕಲ್ ನಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಯಲಿದ್ದು, ರ್ಯಾಲಿಯಲ್ಲಿ ಬಿಜೆಪಿ – ಜೆಡಿಎಸ್ ನಾಯಕರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Advertisement

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement