ನವದೆಹಲಿ : “ದಾಖಲೆ ಸಂಖ್ಯೆಯಲ್ಲಿ” ಮತ ಚಲಾಯಿಸಿ, ಹೆಚ್ಚಿನ ಮತದಾನವು “ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇಂದು ಮತದಾನ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಟ್ವೀಟ್ ಮೂಲಕ ದೇಶದ ಜನರಿಗೆ ಮನವಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತ ಚಲಾಯಿಸುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇನೆ. ಹೆಚ್ಚಿನ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ನಾನು ವಿಶೇಷವಾಗಿ ಒತ್ತಾಯಿಸುತ್ತೇನೆ. “ನಿಮ್ಮ ಮತವೇ ನಿಮ್ಮ ಧ್ವನಿ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಕೇರಳ, ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ ಗಢ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರಾ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ.62.37ರಷ್ಟು ಮತದಾನವಾಗಿದ್ದು, 2019ರಲ್ಲಿ ಶೇ.69.43ರಷ್ಟು ಮತದಾನವಾಗಿತ್ತು.