ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‍ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಪರ ವಕೀಲರಾದ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸಂಸದರ ವಿರುದ್ಧ ಎಫ್‌ಐಆರ್ ದಾಖಲಾದ ಒಂದು ತಿಂಗಳ ನಂತರ ಪ್ರಜ್ವಲ್ ಸಿಐಡಿ ಕ್ರೈಂ ನಂ. 20ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿರುತ್ತಾರೆ.
ಪ್ರಜ್ವಲ್ ವಿರುದ್ಧದ ಮೂರು ಅತ್ಯಾಚಾರ ಕೇಸ್‌ಗಳಿಗೂ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಇನ್ನು ಇಂದು ಸಂಜೆ ವಕೀಲ ಅರುಣ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯವನ್ನು ಮನವಿ ಮಾಡುವ ಸಾಧ್ಯತೆ ಇದೆ.