ಚನ್ನಗಿರಿ : ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಕೊಟ್ಟ ಮಾತಿನಂತೆ ಪ್ರತಿ ತಿಂಗಳು ನಿಮ್ಮ ಅಕೌಂಟ್ ಗೆ ಎರಡು ಸಾವಿರ ಬರುತ್ತಿದೆ, ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ 2 ಸಾವಿರ ಮಾಡಿದರೂ ಹೆದರುವ ಅವಶ್ಯಕತೆ ಇಲ್ಲ, ನಿಮ್ಮ ಕಣ್ಣೀರು ಒರೆಸುವ ಕೆಲಸ ಮಾಡಿದ್ದೇವೆ ಎಂದು ಜೋಳದಾಳು ಗ್ರಾಮದಲ್ಲಿ ತಿಳಿಸಿದರು. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ವಿಷಯ ತಿಳಿಸಿದರು.
ಈ ಗ್ರಾಮಕ್ಕೆ ಸರ್ಕಾರಿ ಬಸ್ ಅವಶ್ಯಕತೆ ಇದೆ ಈಗಾಗಲೇ ಸಂಬಂಧಪಟ್ಟವರಿಗೆ ಪತ್ರ ಬರೆದಿದ್ದು ಮಾತನಾಡಿರುವೆ, ಶೀಘ್ರದಲ್ಲೇ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಇಂದು ಸ್ಪರ್ಧಾತ್ಮಕ ಯುಗ ಇಂತಹ ಸ್ಪರ್ಧಾತ್ಮಕ ಯುಗಕ್ಕೆ ಸಂಬಂಧಿಸಿದಂತೆ ಮಕ್ಕಳನ್ನು ಸಿದ್ಧಗೊಳಿಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ . ಇಂತಹ ಸನ್ನಿವೇಶದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಎಲ್ ಜಯಪ್ಪ ಅವರ ನೇತೃತ್ವದ ತಂಡ ಮಕ್ಕಳಿಗೆ ಬೇಕಾದ ಸಂಪನ್ಮೂಲ ಸಾಹಿತ್ಯ ಕೈಪಿಡಿಗಳನ್ನು ರಚಿಸಿ ಸಮಯಕ್ಕೆ ಸರಿಯಾಗಿ ಮಕ್ಕಳಿಗೆ ನೀಡಿ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸುತ್ತಿರುವುದು ಅತ್ಯಂತ ಹೆಮ್ಮೆಯ ವಿಚಾರ ಎಂದರು, ಇಂತಹ ಪರೀಕ್ಷೆಗಳಿಗೆ ಮಕ್ಕಳನ್ನು ಸಜ್ಜುಗೊಳಿಸುವುದರಿಂದ ಮುಂದಿನ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅತ್ಯುತ್ತಮವಾಗಿ ಎದುರಿಸಲು ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಯದ ಜಯಪ್ಪನವರು ಮಾತನಾಡಿ ಈ ಪರೀಕ್ಷೆಯನ್ನು ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ನೀಡುವುದರ ಮುಖಾಂತರ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ನೆರವಾಗಲಿದ್ದು ಒಟ್ಟು ಪ್ರತಿ ತಿಂಗಳು 1,000 ದಂತೆ ನಾಲ್ಕು ವರ್ಷಗಳ ಕಾಲ 48000 ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಈ ಬಗ್ಗೆ ಶಾಲೆಗಳಲ್ಲಿ ಹೆಚ್ಚು ತರಬೇತಿ ನೀಡುತ್ತಿದ್ದು ಹೆಚ್ಚಿನ ವಿದ್ಯಾರ್ಥಿಗಳು ಆಯ್ಕೆಯಾಗುವ ಭರವಸೆ ಇದೆ ಎಂದು ತಿಳಿಸಿದರು