ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

WhatsApp
Telegram
Facebook
Twitter
LinkedIn

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ: ನೇರಳೆ ಬೀಜ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೇ ದೇಹದ ತೂಕ ಕಡಿಮೆಯಾಗುವುದು. ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

BC Suddi   About Us
For Feedback - [email protected]

Related News

LATEST Post

WhatsApp Icon Telegram Icon