ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿಯ ವತಿಯಿಂದ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿರುವ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಬರೀ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ ಅಂತಾ ಆರೋಪಿಸಿದ್ದಾರೆ.
