ನವದೆಹಲಿ :ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ್ದಾರೆ. ಪ್ರಸ್ತುತ ಹದಿನೈದು ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿವೆ.
ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ಸಿಕ್ಕಿತು.
ಮಾಹಿತಿ ಪಡೆದ 15 ನಿಮಿಷಗಳಲ್ಲಿ 15 ಅಗ್ನಿಶಾಮಕ ಟೆಂಡರ್‌ಗಳು ಸ್ಥಳವನ್ನು ತಲುಪಿದವು. ಬೆಂಕಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ನೋಯ್ಡಾ ಡಿಸಿಪಿ ರಾಮ್ ಬದನ್ ಸಿಂಗ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು. ಒಬ್ಬ ಎಲೆಕ್ಟ್ರಿಷಿಯನ್ ಪರ್ಮಿಂದರ್ ಬೆಂಕಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡ ಎಂದು ವರದಿಯಾಗಿದೆ.