ಚಿತ್ರದುರ್ಗ: 2023-24ನೇ ಸಾಲಿನ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2023ರ ಆಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪರೀಕ್ಷೆಯನ್ನು 2023-24 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ಪರೀಕ್ಷೆ ನಡೆಸಲು 2023ರ ಡಿಸೆಂಬರ್ 17 ರಂದು ತೀರ್ಮಾಸಿಸಲಾಗಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಸೆಪ್ಟೆಂಬರ್ 13 ರಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‍ಸೈಟ್ ನ ಎನ್.ಎಂ.ಎಂ.ಎಸ್ ಲಾಗಿನ್ ನಲ್ಲಿ ಲಭ್ಯವಿದೆ.
ಶಾಲಾ ಮುಖ್ಯಸ್ಥರು, ಉಪಪ್ರಾಂಶುಪಾಲರು ತಮ್ಮ ಶಾಲಾ ವಿದ್ಯಾರ್ಥಿಗಳ ಅರ್ಜಿಗಳನ್ನು ಕಡ್ಡಾಯವಾಗಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಎನ್.ಎಂ.ಎಂ.ಎಸ್ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಡಯಟ್ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಉಪನಿರ್ದೇಶಕ ನಾಸೀರುದ್ದೀನ್ ತಿಳಿಸಿದ್ದಾರೆ.