ನ.13 ರಂದು ಗ್ಲಾಸ್‍ಹೌಸ್‍ನಲ್ಲಿ ಫಲಪುಷ್ಪ ಪ್ರದರ್ಶನ ಅಂಗವಾಗಿ ಸಾಂಸ್ಕøತಿಕ ಕಾರ್ಯಕ್ರಮ

 

ದಾವಣಗೆರೆ:  ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯಿಂದ ನವೆಂಬರ್ 13 ರಿಂದ 16 ರ ವರೆಗೆ ಗ್ಲಾಸ್ ಹೌಸ್‍ನಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದ್ದು ಇಲ್ಲಿ ನ.13 ರಂದು ಸಂಜೆ ಲೇಸರ್, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.

ಫಲಪುಷ್ಪ ಪ್ರದರ್ಶನದ ಅಂಗವಾಗಿ ಸಂಜೆ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳ ವೀಕ್ಷಣೆಗಾಗಿ ಪ್ರವೇಶವು ಉಚಿತವಾಗಿರುತ್ತದೆ. ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ನೃತ್ಯ ರೂಪಕ, ಲೇಸರ್ ಶೋ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಫಲಪುಷ್ಪ ಪ್ರದರ್ಶನದಲ್ಲಿ ಚಂದ್ರಯಾನ-3, ವಿವಿಧ ಕಲಾತ್ಮಕ ಪುಷ್ಪಗಳ ಪ್ರದರ್ಶನ ಸೇರಿದಂತೆ ಔಷಧಗಿಡಗಳ ಪ್ರದರ್ಶನ, ವಿವಿಧ ಖಾದ್ಯವುಳ್ಳ ಕ್ಯಾಂಟೀನ್‍ಗಳು, ಉತ್ತರ ಕರ್ನಾಟಕ, ಮಲೆನಾಡು, ಮೈಸೂರು ಸೇರಿದಂತೆ ವಿವಿಧ ಭಾಗಗಳ ತಿನಿಸುಗಳು ಇಲ್ಲಿರಲಿವೆ ಎಂದು ಅವರು ತಿಳಿಸಿದ್ದಾರೆ.

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement