ಬೆಂಗಳೂರು : ನವೆಂಬರ.20 ರಂದು ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್ ಆಗುವ ಸಾಧ್ಯತೆಯಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನಲಾಗಿದೆ.
ಹೀಗಾಗಿ ಮದ್ಯದಂಗಡಿ ಮಾಲೀಕರು ಮುಷ್ಕರ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ವಚ್ಛ ಅಬಕಾರಿ ಅಭಿಯಾನ ಘೋಷಣೆ ಅಡಿ ಹೋರಾಟ ಮಾಡಲು ಸಜ್ಜಾಗಿದ್ದು, ನ. 20ರಂದು ರಾಜ್ಯವ್ಯಾಪ್ತಿ ಮದ್ಯ ಮಾರಾಟ ಸ್ಥಗಿತಗೊಳಿಸಿ ಮದ್ಯದಂಗಡಿ ಮಾಲೀಕರ ಪ್ರತಿಭಟನೆ ನಡೆಸಲಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ನವೀಕರಣ, ಸಿಎಲ್ 7 ಲೈಸೆನ್ಸ್ ಗೆ ಅನುಮತಿ ಹೆಸರಿನಲ್ಲಿ ಮದ್ಯದಂಗಡಿ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆ ಅಬಕಾರಿ ಇಲಾಖೆ ಹಾಗೂ ಮಂತ್ರಿಗಳ ವಿರುದ್ಧ ಮದ್ಯದಂಗಡಿ ಮಾಲೀಕರು ಕಿಡಿಕಾರಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾ ಮಟ್ಟದಲ್ಲಿ ಮದ್ಯ ಮಾರಾಟ ಸ್ಥಗಿತಕ್ಕೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.