ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಎನ್ನುವರು ಜುಲೈ 16ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದರೆ, ನಾಗರಾಜ್ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಪುತ್ರ ನಾಗರಾಜ್ ಎಂಬುವರು ಒಳಗೆ ಬಿಡಿ ಎಂದು ಇಷ್ಟು ಬಾರಿ ಕೇಳಿದರು ಪಂಚೆ ಹಾಕೊಂಡಿದ್ದಾರೆ. ಮಾಲ್ ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ ಎಂದು ಸಿಬ್ಬಂದಿ ತಮ್ಮದೇ ಮೊಂಡು ವಾದ ಮಾಡಿದ್ದಾರೆ. ಅಲ್ಲದೇ ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಎಂದು ಪ್ರವೇಶ ದ್ವಾರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ. ಈ ಘಟನೆಗೆ ನೆಟ್ಟಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರೈತ ಬೆಳೆಯುವ ಬೆಳೆ ಬೇಕು. ರೈತನಿಗೆ ಮರ್ಯಾದೆ ಕೊಡೋಕೆ ಬರಲ್ವಾ ಅಂತ ಪ್ರಶ್ನಿಸುತ್ತಿದ್ದಾರೆ.ಇನ್ನೂ ಕೆಲ ನೆಟ್ಟಿಗರು ಪಂಚೆ ಹಾಕಿ ಬಂದ್ರೆ ಏನು ತಪ್ಪು. ಕಾಸು ಕೊಟ್ಟು ಸಿನಿಮಾ ನೋಡೋಕೆ ಅವರು ಬಂದಿರೋದು, ಫ್ರೀಯಾಗಿ ನೋಡೋಕೆ ಅಲ್ವಲ್ಲ ಅಂತ ಮಾಲ್ ವಿರುದ್ಧ ಕಿಡಿಕಾರುತ್ತಿದ್ದಾರೆ.