ಪಟಾಕಿ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ- 12 ಮಂದಿ ಸಾವು

ಅನೇಕಲ್: ಬೆಂಗಳೂರು ನಗರ ಜಿಲ್ಲೆಯ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದೆ, ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಅಂಗಡಿಯೊಳಡೆ ಪರಿಶೀಲನೆ ನಡೆಸುವಾಗ, 12 ಮೃತದೇಹಗಳು ಪತ್ತೆಯಾಗಿವೆ.
ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Advertisement

ಹಿಂಬಾಗಿಲಿನಿಂದ ಹೊರ ಬಂದಿದ ಹಿನ್ನಲೆ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement