ನವದೆಹಲಿ;ಬಿಜೆಪಿ ಸಂಸದೆ ಲಾಕೆಟ್ ಚಟರ್ಜಿ ಅವರು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಮಣಿಪುರ ಘಟನೆಯನ್ನು ಖಂಡಿಸಿದ್ದು ಮಣಿಪುರದ ಪರಿಸ್ಥಿತಿ ಪಶ್ಚಿಮ ಬಂಗಾಳದಲ್ಲೂ ಇದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಲಾಕೆಟ್ ಚಟರ್ಜಿ ವಾಗ್ದಾಳಿ ನಡೆಸಿದ್ದು, ಇತ್ತೀಚೆಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದರು.
ಮಣಿಪುರ ಘಟನೆಯನ್ನು ನಾವು ಖಂಡಿಸುತ್ತೇವೆ, ಇದು ದುಃಖದ ಘಟನೆ. ಆದರೆ ದಕ್ಷಿಣ ಪಂಚ್ಲಾದಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತೆಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ, ಇದು ಮಣಿಪುರ ಘಟನೆಗಿಂತ ಕಡಿಮೆ ದುಃಖವೇ? ವ್ಯತ್ಯಾಸವೆಂದರೆ ಈ ಘಟನೆಯ ಯಾವುದೇ ವಿಡಿಯೋ ಇಲ್ಲ ಎಂದು ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರ ಪೊಲೀಸರು ಈಗ ಕೇಸ್ ನ್ನು ದಾಖಲಿಸಲು ಅವಕಾಶ ಮಾಡಿಕೊಡಿ ಎಂದು ಸುಕಾಂತ ಮಜುಂದಾರ್ ಶುಕ್ರವಾರ ಹೇಳಿದ್ದಾರೆ.